ಕಡೂರು ವೈದ್ಯಾಧಿಕಾರಿ ಡಾ. ಎಸ್.ಎನ್ ಉಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

Update: 2025-01-08 05:50 GMT

ಚಿಕ್ಕಮಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಸಂಪಾದನೆ ಆರೋಪದ ಮೇಲೆ ಕಡೂರು ವೈದ್ಯಾಧಿಕಾರಿ ಡಾ. ಎಸ್.ಎನ್ ಉಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪ್ರಕರಣ ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಮೂಲ ಆದಾಯಕ್ಕಿಂತ ಅಧಿಕವಾಗಿ ಭ್ರಷ್ಟಾಚಾರದಿಂದ ಹೆಚ್ಚಿನ ಪ್ರಮಾಣದಲ್ಲಿ ಸ್ಥಿರ ಹಾಗೂ ಚರ ಸ್ವತ್ತುಗಳನ್ನು ಸಂಪಾದನೆ ಮಾಡಿದ್ದಾರೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.

ತಮ್ಮ ಮತ್ತು ತಮ್ಮ ಪತ್ನಿ ಟಿ.ಎಸ್. ಮಂಜುಳ ಹಾಗೂ ಕುಟುಂಬದ ಸದಸ್ಯರ ಹೆಸರಿಗೆ ಸ್ಥಿರ ಆಸ್ತಿಯನ್ನು ಖರೀದಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಎರಡು ಜನ ಮಕ್ಕಳನ್ನು ರಾಯಚೂರು ಮತ್ತು ದಾವಣಗೆರೆಯ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿಸುತ್ತಿದ್ದು ಅಧಿಕ ಆಸ್ತಿ ಸಂಪಾದನೆ ಪ್ರಕರಣ ದಾಖಲಿಸಲಾಗಿದೆ.

ಡಾಕ್ಟರ್ ಉಮೇಶ್ 1995- 2023  ಅವಧಿಯಲ್ಲಿ ಕಡೂರು ತಾಲ್ಲೂಕು ಆಡಳಿತ ವೈದ್ಯಾಧಿಕಾರಿಗಳಾಗಿ ಹಾಗೂ 2020 ರಿಂದ 2023 ರವರೆಗೆ ಚಿಕ್ಕಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಕರ್ತವ್ಯಕ್ಕೆ ಸೇರಿದಾಗಿನಿಂದ ಇಲ್ಲಿಯವರೆಗೆ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News