ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Update: 2024-11-30 15:44 GMT

ಸಾಂದರ್ಭಿಕ ಚಿತ್ರ 

ಚಿಕ್ಕಮಗಳೂರು: ವ್ಯಕ್ತಿಯೋರ್ವರು ಕಾಡಾನೆ ದಾಳಿಯಿಂದ ಮೃತಪಟ್ಟ ಘಟನೆ ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿ ಶನಿವಾರ ವರದಿಯಾಗಿದೆ. ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದ ಉಮೇಶ್(56) ಮೃತಪಟ್ಟ ವ್ಯಕ್ತಿ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ಉಮೇಶ್ ಅವರ ಮೇಲೆ ದಾಳಿ ಮಾಡಿದ್ದು, ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆನೆಗಳ ಹಾವಳಿಗೆ ಕಡಿವಾಣ ಹಾಕುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ನರಸಿಂಹರಾಜಪುರ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News