ಮೂಡಿಗೆರೆ | ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್ ಮರಕ್ಕೆ ಢಿಕ್ಕಿ; ನಾಲ್ವರಿಗೆ ಗಂಭೀರ ಗಾಯ
Update: 2025-01-26 19:00 IST

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್‌ವೊಂದು ಮರಕ್ಕೆ ಢಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ ಮೈಸೂರು ಜಯದೇವ ಆಸ್ಪತ್ರೆ ಸಿಬ್ಬಂದಿಗಳು ಧರ್ಮಸ್ಥಳಕ್ಕೆ ತೆರಳುವಾಗ ಬಿದರಹಳ್ಳಿ ಗ್ರಾಮದ ಬಳಿ ಬಸ್ ಮರಕ್ಕೆ ಢಿಕ್ಕಿಯಾಗಿದೆ. ಪರಿಣಾಮ ನಾಲ್ವರು ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
11 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.