ಮೂಡಿಗೆರೆ: ಮೂವತ್ತು ಅಡಿ ಎತ್ತರದಿಂದ ಕೆಳಕ್ಕೆ ಬಿದ್ದ ಕಾರು; ಮೂವರು ಗಂಭೀರ

Update: 2024-09-21 07:45 GMT

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು  ಪಲ್ಟಿಯಾಗಿ ಗ್ರಾಮ ಪಂಚಾಯಿತಿ ಆವರಣಕ್ಕೆ ಉರಳಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಸುಂಕಸಾಲೆ ಬಳಿ ನಡೆದಿದೆ.

ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಕಾರು ರಸ್ತೆಯ ತಿರುವಿನಲ್ಲಿ ದಟ್ಟ ಮಂಜಿನ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

30 ಅಡಿ ಎತ್ತರದಿಂದ  ಕೆಳಗೆ ಬಿದ್ದ ಪರಿಣಾಮ ಕಾರು ಬಹುತೇಕ ಜಖಂಗೊಂಡಿದೆ. ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

 ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News