ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಲಿರುವ ನಕ್ಸಲರು

Update: 2025-01-08 07:36 GMT

ನಕ್ಸಲ್ ಶರಣಾಗತಿ ಸಮಿತಿಗೆ ಹೊಸ ವರ್ಷದ ಶುಭಾಶಯದ ಕೖ ಬರಹದ ಗ್ರೀಟಿಂಗ್ ನೀಡಿ ಸ್ವಾಗತಿಸಿದ ಮುಂಡಗಾರು ಲತಾ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ಶರಣಾಗಬೇಕಿದ್ದ ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತರಾಗಲಿದ್ದಾರೆ.

ಆರು ಜನ ನಕ್ಸಲರ ಪೋಷಕರು ಚಿಕ್ಕಮಗಳೂರು ಜಿಲ್ಲಾಡಳಿದ ಮುಂದೆ ತಮ್ಮವರನ್ನು ನೋಡಲು ಕಾತುರದಿಂದ ಕಾದಿದ್ದರು. ಆದರೆ, ದಿಢೀರ್ ಬದಲಾವಣೆ ಗೊಂಡಿದ್ದು, ಪೋಷಕರನ್ನು ಬೆಂಗಳೂರಿಗೆ ಕಳಿಸಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಬೆಂಗಳೂರಿಗೆ ತೆರಳುವ ವಿಚಾರವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಕ್ಸಲ್ ಪುನರ್ ವಸತಿ ಸಮಿತಿ ಸದಸ್ಯರಾದ ಡಾ.ಬಂಜಗೆರೆ ಜಯಪ್ರಕಾಶ್, ಪಾರ್ವತೀಶ್ ಬಿಳಿದಾಳೆ, ಕೆ.‍ಶ್ರೀಪಾಲ್‌, ಶಾಂತಿಗಾಗಿ ನಾಗರಿಕರ ವೇದಿಕೆಯ ಪ್ರೊ.ನಗರಗೆರೆ ರಮೇಶ್, ಪ್ರೊ.ವಿ.ಎಸ್.ಶ್ರೀಧರ್ ಹಾಗೂ ಜನಶಕ್ತಿಯ ನೂರ್ ಶ್ರೀಧರ್, ಆರು ಮಂದಿ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ಬಾಳೆಹೊಳೆಯ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ಕುತ್ಲ್ಲೂರು, ರಾಯಚೂರಿನ ಮಾರಪ್ಪಅರೋಲಿ, ತಮಿಳುನಾಡಿನ ಕೆ.ವಸಂತ್, ಕೇರಳದ ಟಿ.ಎನ್.ಜೀಶ ಅವರು ಸಮಾಜದ ಮುಖ್ಯವಾಹಿನಿಗೆ ಬರಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News