ಮೂಡಿಗೆರೆ: ಮೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ
Update: 2024-02-16 09:11 GMT
ಚಿಕ್ಕಮಗಳೂರು: 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಮೂಡಿಗೆರೆಯ ದಾರದಹಳ್ಳಿ ಮೆಸ್ಕಾಂ ಕಿರಿಯ ಇಂಜಿನಿಯರ್ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹಂಡುಗುಳಿ ಗ್ರಾಮದ ಮುಹಮ್ಮದ್ ಅಲಿ ಎಂಬುವವರ ಜಮೀನಿನ ನೀರಾವರಿ ಸ್ಥಾವರಕ್ಕೆ ವಿದ್ಯುತ್ ಸಂಪರ್ಕ ನೀಡಲು 15,000 ರೂ. ಲಂಚ ನೀಡುವಂತೆ ಮೆಸ್ಕಾಂ ಕಿರಿಯ ಇಂಜಿನಿಯರ್ ಮಂಜುನಾಥ್ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.
ಈ ಬಗ್ಗೆ ಮುಹಮ್ಮದ್ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ 15 ಸಾವಿರ ರೂ. ನೀಡುತ್ತಿದ್ದ ಮಂಜುನಾಥ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಇನ್ ಸ್ಪೆಕ್ಟರ್ ಅನಿಲ್ ರಾಥೋಡ್, ಅನಿಲ್ ನಾಯಕ್ ಸಿಬ್ಬಂದಿಯಾದ ಪ್ರಸಾದ್, ಸವಿನಯ್ ವಿಜಯ ಭಾಸ್ಕರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.