ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ: ಸಿಎಂ ಸಿದ್ದರಾಮಯ್ಯ

Update: 2024-10-21 09:50 GMT

ಚಿತ್ರದುರ್ಗ, ಅ.21: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡುತ್ತಿದ್ದರು.

ಬಿಜೆಪಿ ಶಾಸಕ ಯತ್ನಾಳ್ ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 1000 ಕೋಟಿ ರೂ. ಬಳಸಿ ಕಾಂಗ್ರೆಸ್ ಸರಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆಯನ್ನು ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಕಡೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News