ಹಿರಿಯೂರು | ಅಪರಿಚಿತ ಬೈಕ್ ಢಿಕ್ಕಿ: ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ
Update: 2025-03-14 20:24 IST

ಚಿತ್ರದುರ್ಗ: ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ಬೈಕ್ ಢಿಕ್ಕಿಯಾಗಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಳನೀರು ಕುಡಿಯಲು ಉಪಸಭಾಪತಿ ಅವರ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಉಪಸಭಾಧ್ಯಕ್ಷ ಲಮಾಣಿ ಅವರಿಗೆ ಗಾಯಗಳಾಗಿವೆ.
ಸ್ಥಳಕ್ಕೆ ಹಿರಿಯೂರು ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ರುದ್ರಪ್ಪ ಲಮಾಣಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.