ಲೈಂಗಿಕ ಕಿರುಕುಳ ಪ್ರಕರಣ | ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Update: 2024-04-29 13:28 GMT

ಚಿತ್ರದುರ್ಗ : ಸುಪ್ರೀಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದ ಆರೋಪಿಯಾಗಿರುವ ಮುರುಘಾ ಶ್ರೀ ಇಂದು(ಎ.30) ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್  ನ್ಯಾಯಾಲಯದ ಮುಂದೆ ಶರಣಾಗಿದ್ದು,  ನ್ಯಾಯಾಧೀಶರು ಮೇ.27ಕ್ಕೆ ವಿಚಾರಣೆ ನಿಗದಿಗೊಳಿಸಿ, ಸುಪ್ರೀಂ ಕೋರ್ಟ್‌ನ ಆದೇಶದಂತೆ ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ.

ನ.23 ರಲ್ಲಿ ಮುರುಘಾಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದ ಅಪ್ರಾಪ್ತ ಬಾಲಕೀಯರ ಪರ ವಕೀಲರು, ಮುರುಘಾ ಶ್ರೀಗಳ ಜಾಮೀನು ಆದೇಶ ರದ್ದುಪಡಿಸಬೇಕೆಂದು ಕೋರಿದ್ದರು.  ಜಾಮೀನು ಆದೇಶದ ವಿಚಾರಣೆ ನಡೆಸಿದ ಸುಪ್ರೀಂ,  ಹೈಕೋರ್ಟ್‌ನ ಆದೇಶವನ್ನು ರದ್ದುಪಡಿಸಿ ನಾಲ್ಕು ತಿಂಗಳೊಳಗಾಗಿ ಮುರುಘಾಶ್ರೀಗಳ ವಿಚಾರಣೆ ನಡೆಸಬೇಕು. ಇಲ್ಲವಾದರೆ ಇನ್ನೂ ಎರಡು ತಿಂಗಳು ಹೆಚ್ಚುವರಿಯಾಗಿ ಪಡೆದುಕೊಂಡು ಸಂಪೂರ್ಣ ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಲಾಗಿತ್ತು. ಸುಪ್ರೀಂ ಕೋರ್ಟ್‌ನ ಆದೇಶದಂತೆ ಜಾಮೀನು ಅರ್ಜಿ ರದ್ದುಗೊಂಡ ಹಿನ್ನೆಲೆಯಲ್ಲಿ ಮುರುಘಾಶ್ರೀಗಳು ಇಂದು(ಎ.29) ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News