ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
Update: 2025-03-28 23:18 IST

Photo | IPL
ಚೆನ್ನೈ : ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್‌ಗಳಿಂದ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 7 ವಿಕೆಟ್ ನಷ್ಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್‌ಗೆ 196 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಸಿಎಸ್‌ಕೆ 8 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿ ಸೋಲನುಭವಿಸಿತು.