IIFA Awards-2024: ಶಾರುಕ್ ಖಾನ್ ಗೆ ಅತ್ಯುತ್ತಮ ನಟ ಪ್ರಶಸ್ತಿ, ʼಅನಿಮಲ್ʼ ಅತ್ಯುತ್ತಮ ಚಲನಚಿತ್ರ
ಅಬುಧಾಬಿ: ಸೂಪರ್ಸ್ಟಾರ್ ಶಾರುಕ್ ಖಾನ್ ʼ ಐಐಎಫ್ಎ(IIFA)- 2024ʼ ರ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮತ್ತು ʼಅನಿಮಲ್ʼ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಅನಿಮಲ್ ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ ಮತ್ತು ಪೋಷಕ ನಟ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ನಟ ವಿಕ್ಕಿ ಕೌಶಲ್ ಮತ್ತು ನಿರ್ದೇಶಕ ಕರಣ್ ಜೋಹರ್ ಐಐಎಫ್ಎ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಡೆಸಿಕೊಟ್ಟಿದ್ದಾರೆ. ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಅನಿಮಲ್ (ANIMAL) ಚಿತ್ರ ಪಡೆದುಕೊಂಡಿದ್ದು, ‘ಮಿಸಸ್ ಚಟರ್ಜಿ vs ನಾರ್ವೆ‘ ಚಿತ್ರದಲ್ಲಿ ನಾಯಕಿ ಪಾತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ರಾಣಿ ಮುಖರ್ಜಿ ಪಡೆದಿದ್ದಾರೆ.
’12th ಫೇಲ್‘ ಸಿನಿಮಾ ನಿರ್ದೇಶಕ ವಿಧು ವಿನೋದ್ ಚೋಪ್ರಾ ಅತ್ತುತ್ತಮ ನಿರ್ದೇಶಕ ಪ್ರಶಸ್ತಿ ಪಡೆದಿದ್ದಾರೆ. ಅನಿಮಲ್ ಸಿನಿಮಾದಲ್ಲಿ ಅಭಿನಯಿಸಿದ್ದ ಅನಿಲ್ ಕಪೂರ್ ಉತ್ತಮ ಪೋಷಕ ನಟ ಪ್ರಶಸ್ತಿ ಮತ್ತು ಬಾಬಿ ಡಿಯೋಲ್ ಅತ್ಯುತ್ತಮ ಖಳ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.