ಕಂಗನಾ ರಣಾವತ್ ಅವರ ʼಎಮೆರ್ಜೆನ್ಸಿʼ ಚಿತ್ರಕ್ಕೆ ಬಾಂಗ್ಲಾದಲ್ಲಿ ನಿಷೇಧ

Update: 2025-01-15 09:58 GMT

Photo credit: X

ಮುಂಬೈ: ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನ ಚರಿತ್ರೆಯನ್ನು ಆಧರಿಸಿದ ಕಂಗನಾ ರಣಾವತ್ ಅವರ ಮುಂಬರುವ ಚಿತ್ರ 'ಎಮರ್ಜೆನ್ಸಿ' ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ, ಬಾಂಗ್ಲಾದೇಶದಲ್ಲಿ ಈ ಚಿತ್ರವನ್ನು ನಿಷೇಧಿಸಲಾಗಿದೆ. ಎರಡೂ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ ಚಿತ್ರಕ್ಕೆ ನಿಷೇಧ ಹೇರಲಾಗಿದೆ ಎಂದು ವರದಿಯಾಗಿದೆ.

ಚಿತ್ರದ ವಿಷಯಕ್ಕಿಂತ ಹೆಚ್ಚಾಗಿ ಭಾರತ-ಬಾಂಗ್ಲಾದೇಶ ಸಂಬಂಧಗಳಲ್ಲಿ ಹದಗೆಟ್ಟ ಕಾರಣದಿಂದ ಚಿತ್ರವನ್ನು ನಿಷೇಧಿಸಲಾಗಿದೆ ಎಂದು ಮೂಲವನ್ನುಲ್ಲೇಖಿಸಿ ನ್ಯೂಸ್‌ 18 ವರದಿ ಮಾಡಿದೆ.

"ಬಾಂಗ್ಲಾದೇಶದಲ್ಲಿ ಎಮೆರ್ಜೆನ್ಸಿ ಚಿತ್ರದ ಪ್ರದರ್ಶನವನ್ನು ನಿಲ್ಲಿಸುವ ನಿರ್ಧಾರವು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಪ್ರಸ್ತುತ ಹದಗೆಟ್ಟ ಸಂಬಂಧಗಳಿಗೆ ಸಂಬಂಧಿಸಿದೆ" ಎಂದು ಮೂಲಗಳು ತಿಳಿಸಿವೆ.

ಚಿತ್ರದಲ್ಲಿ ಕಂಗನಾ ರಣಾವತ್, ಅನುಪಮ್ ಖೇರ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್ ಮತ್ತು ದಿವಂಗತ ಸತೀಶ್ ಕೌಶಿಕ್ ನಟಿಸಿದ್ದಾರೆ.

ಸೆಪ್ಟೆಂಬರ್ 2024 ರಲ್ಲಿ ಬಿಡುಗಡೆಯಾಗಬೇಕಿದ್ದ ಈ ಚಿತ್ರವನ್ನು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಅವಶ್ಯಕತೆಗಳನ್ನು ಪೂರೈಸದ ಕಾರಣ ಮುಂದೂಡಲಾಗಿತ್ತು. ನಂತರ 13 ಬದಲಾವಣೆಗಳೊಂದಿಗೆ U/A ಪ್ರಮಾಣೀಕರಣವನ್ನು ಪಡೆದಿದ್ದು, ಈ ಚಿತ್ರವು ಜನವರಿ 17, 2025 ರಂದು ಬಿಡುಗಡೆಯಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News