ಲೈಂಗಿಕ ದೌರ್ಜನ್ಯ ಪ್ರಕರಣ; ಮಲಯಾಳಂ ನಟ ಸಿದ್ದೀಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ
Update: 2024-09-24 06:05 GMT
ಕೇರಳ: ನಟಿಯೊಬ್ಬರು ದಾಖಲಿಸಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಲಯಾಳಂ ನಟ ಸಿದ್ದೀಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ.
ಆಗಸ್ಟ್ ನಲ್ಲಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದೀಕ್ ವಿರುದ್ಧ ತಿರುವನಂತಪುರ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಟಿಯೋರ್ವರ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು 506ರಡಿಯಲ್ಲಿ ಸಿದ್ದೀಕ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಮಲಯಾಳಂ ಚಿತ್ರರಂಗದಲ್ಲಿನ ಲೈಂಗಿಕ ಕಿರುಕುಳದ ಕುರಿತ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ಸಮಿತಿ ಮುಂದೆ ನಟಿ ತಮ್ಮ ಹೇಳಿಕೆಯನ್ನು ನೀಡಿದ್ದರು. ಆ ಬಳಿಕ ಪ್ರಕರಣ ಬಯಲಾಗಿತ್ತು.