ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ: ನಟ ದುನಿಯಾ ವಿಜಯ್‌

Update: 2023-08-01 07:12 GMT

ನಟ ದುನಿಯಾ ವಿಜಯ್‌ (newindianexpress.com)

ಬೆಂಗಳೂರು: ಧರ್ಮಸ್ಥಳದಲ್ಲಿ ಕಳೆದ 11 ವರ್ಷಗಳ ಹಿಂದೆ ನಡೆದ ಕುಮಾರಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್‌ ಪ್ರತಿಕ್ರಿಯಿಸಿದ್ದು, ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ.

“ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು” ಎಂಬ ಬುದ್ಧವಾಣಿಯೊಂದಿಗೆ ಫೇಸ್‌ಬುಕ್‌ ನಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿರುವ ದುನಿಯಾ ವಿಜಯ್, ”ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು” ಎಂದು ತಿಳಿಸಿದ್ದಾರೆ.

“ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ” ಎಂದು ವಿಜಯ್ ಬರೆದಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News