ಮೃತ ಮಹಿಳೆಯ ಕುಟುಂಬಕ್ಕೆ 2 ಕೋಟಿ ರೂ. ವಿತರಿಸಿದ ʼಪುಷ್ಪʼ ತಂಡ

Update: 2024-12-25 13:46 GMT
PC : PTI

ಹೈದರಾಬಾದ್ : ಪುಷ್ಪ - 2 ಸಿನೆಮಾ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ರೇವತಿ ಅವರ ಕುಟುಂಬಕ್ಕೆ ನಟ ಅಲ್ಲು ಅರ್ಜುನ್, ಚಿತ್ರ ನಿರ್ಮಾಣ ಸಂಸ್ಥೆ ಮತ್ತು ಚಿತ್ರದ ನಿರ್ದೇಶಕ ಸುಕುಮಾರ್ ಸೇರಿ ಒಟ್ಟು 2 ಕೋಟಿ ರೂ. ಪರಿಹಾರ ನೀಡಿದ್ದಾರೆ.

ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ದಿಲ್ ರಾಜು ಮತ್ತು ಇತರರೊಂದಿಗೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಕಾಲ್ತುಳಿತದಲ್ಲಿ ಗಾಯಗೊಂಡಿರುವ ಬಾಲಕನ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಅವರು ಪರಿಹಾರದ ಚೆಕ್‌ ವಿತರಿಸಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ 1ಕೋಟಿ ರೂ., ʼಪುಷ್ಪʼ ಚಿತ್ರದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ 50 ಲಕ್ಷ ರೂ., ಚಿತ್ರದ ನಿರ್ದೇಶಕ ಸುಕುಮಾರ್ 50 ಲಕ್ಷ ರೂ.ಆರ್ಥಿಕ ನೆರವು ನೀಡಿದ್ದಾರೆ.

ತೆಲಂಗಾಣ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ನಿರ್ಮಾಪಕ ದಿಲ್ ರಾಜು ಅವರು, ಸರ್ಕಾರ ಮತ್ತು ಚಲನಚಿತ್ರೋದ್ಯಮದ ನಡುವೆ ಆರೋಗ್ಯಕರ ಸಂಬಂಧವನ್ನು ಬೆಳೆಸಲು ಚಿತ್ರರಂಗದ ನಿಯೋಗದ ಜೊತೆ ಗುರುವಾರ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ವೈದ್ಯರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯಿಸಿದ ಅಲ್ಲು ಅರವಿಂದ್, ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಮತ್ತು ಎಂದು ವೈದ್ಯರು ತಿಳಿಸಿದ್ದು, ಸಮಾಧಾನ ತಂದಿದೆ. ಬಾಲಕನ ಸಂಪೂರ್ಣ ಚೇತರಿಕೆಯ ಬಗ್ಗೆ ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು.

ದಿಲ್ ರಾಜು ಅವರಿಗೆ ಚೆಕ್ ಹಸ್ತಾಂತರಿಸಿದ ಅಲ್ಲು ಅರವಿಂದ್, ಬಾಲಕನ ಕುಟುಂಬಕ್ಕೆ ತಲುಪಿಸುವಂತೆ ಮನವಿ ಮಾಡಿದರು. ಕುಟುಂಬವನ್ನು ನೇರವಾಗಿ ಭೇಟಿ ಮಾಡುವುದಕ್ಕೆ ಕಾನೂನಿನ ತೊಡಕಿನ ಕುರಿತು ಅವರು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News