ನಿವೃತ್ತ ಶಿಕ್ಷಕ ಅನಂತರಾಜ್ ಇಂದ್ರ ನಿಧನ

Update: 2023-06-27 03:55 GMT

ಮೂಡುಬಿದಿರೆ: ನಿವೃತ್ತ ಶಿಕ್ಷಕ, ಪಡುಬಸದಿಯ ಪುರೋಹಿತ ಪಿ. ಅನಂತರಾಜ್ ಇಂದ್ರ (94) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿಯ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ .

ಮಂಗಳೂರಿನ ಕೆನರಾ ಪ್ರೌಢಶಾಲೆ, ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆ ಬಳಿಕ ಮೂಡುಬಿದಿರೆಯ ಜೈನ ಪ್ರೌಢಶಾಲೆಯಲ್ಲಿ ದೀರ್ಘ ಅವಧಿಗೆ ಅವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ, ಪ್ರೋತ್ಸಾಹವನ್ನು ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ಅಭಯಚಂದ್ರ ಜೈನ್ ಇವರ ವಿದ್ಯಾರ್ಥಿಗಳಾಗಿದ್ದರು ಎನ್ನುವುದು ವಿಶೇಷ.

ಅನಂತ್ ರಾಜ್ ನಿಧನಕ್ಕೆ ಮೂಡುಬಿದಿರೆ ಶ್ರೀ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿ ಸಹಿತ ಪ್ರಮುಖರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ