ಮಂಗಳೂರು: ಡಿ.7ರಂದು ಅಂತರ್ ಜಿಲ್ಲಾ ಸ್ನೂಕರ್, ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್
ಮಂಗಳೂರು: ಕಾಸ್ಕೊ ಪೊಲಿಟನ್ ಕ್ಲಬ್' ಮಂಗಳೂರು ವತಿಯಿಂದ ಡಿ.7, 8 ರಂದು ಮಂಗಳೂರಿನ ಬಾವುಟ ಗುಡ್ಡೆಯ ಕಾಸ್ಕೊ ಪೊಲಿಟನ್ ಕ್ಲಬ್ ಒಳಾಂಗಣ ಕ್ರೀಡಾಂಗಣ ದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಆಹ್ವಾನಿತ ಅಂತರ್ ಜಿಲ್ಲಾ ಸ್ನೂಕರ್ ಮತ್ತು ಬಿಲಿಯರ್ಡ್ಸ್ ಚಾಂಪಿಯನ್‌ಷಿಪ್- ಆಯೋಜಿಸಲಾಗಿದೆ ಎಂದು ಕ್ಲಬ್ ಚೇರ್‌ಮೆನ್ ರಾಜಗೋಪಾಲ್ ರೈ ಹೇಳಿದರು.
ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರಿನಲ್ಲಿ ಸ್ವಾತಂತ್ರ್ಯ ಪೂರ್ವ ದಲ್ಲಿ ಸ್ಥಾಪನೆಯಾದ ಸಂಸ್ಥೆ, ಈ ಹಿಂದೆ ಕುಸ್ತಿ ಸೇರಿದಂತೆ ಹಲವು ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಕೋವಿಡ್ ಸಂದರ್ಭ ಜಿಲ್ಲಾಡಳಿತದ ಜೊತೆ ಸಹಕಾರ ನೀಡಿದ ಪ್ರತಿಷ್ಠಿತ ಸಂಸ್ಥೆಯಾಗಿದೆ.
ಡಿ.7ರಂದು ಬೆಳಗ್ಗೆ 9.30ಕ್ಕೆ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಚಾಂಪಿಯನ್‌ಷಿಪ್ ಉದ್ಘಾಟಿಸಲಿದ್ದಾರೆ. ಕ್ಲಬ್ ಅಧ್ಯಕ್ಷ ಡಾ.ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಉಭಯ ಜಿಲ್ಲೆಗಳ 10 ಕ್ಲಬ್‌ನ ಸದಸ್ಯರು ಭಾಗವಹಿಸಲಿ ದ್ದಾರೆ ಎಂದವರು ತಿಳಿಸಿದ್ದಾರೆ.
ಕ್ಲಬ್ ಕಾರ್ಯದರ್ಶಿ ಎಂ.ಸಿ. ಶೆಟ್ಟಿ, ಜತೆ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಕೋಶಾಧಿಕಾರಿ ದೇವಿಚರಣ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಯೋಗೀಶ್ ಕುಮಾರ್ ಉಪಸ್ಥಿತರಿದರು.