ಉಪ್ಪಿನಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Update: 2023-11-27 08:25 GMT

ಉಪ್ಪಿನಂಗಡಿ: ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿದ್ದ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ, ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News