ಎ.5: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು ಎ.3: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎ.5ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 9ಕ್ಕೆ ನಗರದ ಬಾವುಟಗುಡ್ಡದಲ್ಲಿ ನಡೆಯುವ ತುಳುನಾಡ ಅಮರಸುಳ್ಯ ಸ್ವಾತಂತ್ರ್ಯ ಸಮರ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡ ಸಂಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
9:30ಕ್ಕೆ ನಗರದ ಪಡೀಲ್‌ನಲ್ಲಿರುವ ದ.ಕ. ಜಿಲ್ಲಾಧಿಕಾರಿಯ ಹೊಸ ಕಚೇರಿಯ ಕಟ್ಟಡ ವೀಕ್ಷಿಸುವರು. 10:30ಕ್ಕೆ ನಗರದ ಕೊಡಿಯಾಲ್‌ಬೈಲ್ ಜೈಲ್ ರಸ್ತೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಹಾಗೂ ಪಶು ರೋಗ ತಪಾಸಣೆ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮತ್ತು ಪೂ.11ಕ್ಕೆ ನಗರದ ಉರ್ವಸ್ಟೋರ್ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಾ.ಬಾಬು ಜಗಜೀವನರಾಂರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
12ಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ಮತ್ತು ಕಾರ್ಯಕರ್ತರ ಜೊತೆ ಸಂವಾದ ನಡೆಸುವರು. 2:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೇಸಿಗೆಯ ಸಂದರ್ಭ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಿಲ್ಲೆಯಲ್ಲಿ ಬೇಸಿಗೆಯಿಂದ ತದೋರಬಹುದಾದ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 5:35ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.