ಜು.6ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Update: 2024-07-05 18:28 GMT

ಮುಲ್ಲೈ ಮುಗಿಲನ್

ಮಂಗಳೂರು, ಜು.5: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News