ಜು.25ರಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ: ಮಂಗಳೂರು ವಿಶ್ವವಿದ್ಯಾನಿಲಯ

Update: 2023-07-24 14:35 GMT

ಮಂಗಳೂರು: ಜು.25ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಗಳೂರು ವಿವಿಯ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.25ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.




 




Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News