ಬಂಟ್ವಾಳ: ರೋಗಿಯನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ; ಚಾಲಕ ಮೃತ್ಯು

Update: 2023-08-18 09:43 GMT

ಬಂಟ್ವಾಳ : ರೋಗಿಯೋರ್ವರನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು‌ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಮೃತ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದರು.  ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಆದರೆ ಆ್ಯಂಬುಲೆನ್ಸ್ ಚಾಲಕ ಶಬೀರ್ ಚಿಕಿತ್ಸೆ ಗೆ ಸ್ಪಂದಿಸದೆ ಮೃತ ಪಟ್ಟ ಬಗ್ಗೆ ಆಸ್ಪತ್ರೆಯ ಮೂಲಗಳು ಪೋಲೀಸರಿಗೆ ಮಾಹಿತಿ ನೀಡಿದೆ.

ಆ್ಯಂಬುಲೆನ್ಸ್ ವಾಹನದಲ್ಲಿದ್ದ ರೋಗಿಯ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News