ಬಂಟ್ವಾಳ | ಭೀಕರ ರಸ್ತೆ ಅಪಘಾತ : ನವ ವಿವಾಹಿತೆ ಮೃತ್ಯು

Update: 2024-09-07 10:52 GMT

ಬಂಟ್ವಾಳ : ನವ ದಂಪತಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡ್ ಸಮೀಪದ ತಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವ ದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News