ಬಂಟ್ವಾಳ: ಫೇಸ್‌ಬುಕ್ ನಲ್ಲಿ ಕೋಮುಭಾವನೆ ಕೆರಳಿಸುವ ಪೋಸ್ಟ್; ಆರೋಪಿಯ ಬಂಧನ

Update: 2024-12-09 08:33 GMT

ಬಂಟ್ವಾಳ : ಫೇಸ್ ಬುಕ್ ಖಾತೆಯಲ್ಲಿ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ .

ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಬಂಧಿತ ಆರೋಪಿ. ಈತ  ತನ್ನ ಫೇಸ್ ಬುಕ್ ಖಾತೆಯಲ್ಲಿ ಧರ್ಮಗಳ ಮಧ್ಯೆ ಕೋಮುಭಾವನೆ ಕೆರಳುವ ರೀತಿಯಲ್ಲಿ,   ಧರ್ಮವೊಂದನ್ನು ತೇಜೋವಧೆ ಮಾಡಿದ್ದಲ್ಲದೇ ಮಹಿಳೆಯರ ಮಾನಕ್ಕೆ ಕುಂದುಂಟಾಗುವ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ.

ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯ ವಿರುದ್ದ  ಸುಮೋಟೋ ಕೇಸ್ ದಾಖಲಿಸಿ  ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೋಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.




 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News