ಬಂಟ್ವಾಳ: ಮನೆಗೆ ನುಗ್ಗಿ ಚಾಕು ತೋರಿಸಿ ನಗ, ನಗದು ದರೋಡೆ

Update: 2024-01-11 06:38 GMT

ಬಂಟ್ವಾಳ : ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ವಗ್ಗದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕ ಉದ್ಯಾನವನದ ಮುಂಭಾಗದಲ್ಲಿರುವ ಮನೆಯಲ್ಲಿ  ಪ್ಲೋರಿನ್ ಪಿಂಟೋ ಮತ್ತು ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದ ವೇಳೆ ಈ ದರೋಡೆ ನಡೆಸಲಾಗಿದ್ದು ಸುಮಾರು 2.90 ಲಕ್ಷ ರೂ ಮೌಲ್ಯದ ಚಿನ್ನಾಭರಣ, 30 ಸಾವಿರ ರೂ ನಗದು ಹಾಗೂ ಒಂದು ಮೊಬೈಲ್ ಫೋನ್ ಸೇರಿ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ ನಗದು ದೋಚಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಸುಮಾರು 6.30 ರ ವೇಳೆ ಮನೆಯ ಬೆಲ್ ಬಾರಿಸಿದ್ದು, ಬಾಗಿಲು ತೆರೆದ ಕೂಡಲೇ ಮನೆಯೊಳಗೆ ನುಗ್ಗಿದ  ನಾಲ್ವರು ಮುಸುಕುಧಾರಿಗಳು  ಮನೆಯಲ್ಲಿರುವ ನಗ ನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದಾಗ ಹೆದರಿ ಕಪಾಟಿನ ಬೀಗದ ಕೀ ನೀಡಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಪ್ಲೋರಿನ್ ಪಿಂಟೋ ಅವರ ಮಗ ಆಸ್ಟಿನ್ ಪಿಂಟೋ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾ ಉಪ ನಿರೀಕ್ಷಕ ಹರೀಶ್ ಭೇಟಿ ನೀಡಿದ್ದಾರೆ.  ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News