ಬ್ಯಾರಿ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ ಪ್ರಕಟ

Update: 2024-08-27 12:35 GMT

ಮಂಗಳೂರು, ಆ.27: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ), ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಅವರನ್ನು ಅಕಾಡಮಿಯ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಕಾಡಮಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ., ಹುಸೈನ್ ಕಾಟಿಪಳ್ಳ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಈ ಆಯ್ಕೆ ಮಾಡಿದ್ದು, ಅಕಾಡಮಿಯ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.

ಪ್ರಶಸ್ತಿಯು 50 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆ. 6ರಂದು ಸಂಜೆ 4:30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡಮಿಯ ಅಧ್ಯಕ್ಷ ಉಮರ್ ಯು. ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News