ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಉಪನ್ಯಾಸಕರಿಗೆ ತರಬೇತಿ ಕಾರ್ಯಾಗಾರ

Update: 2025-04-10 11:32 IST
ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಉಪನ್ಯಾಸಕರಿಗೆ ತರಬೇತಿ ಕಾರ್ಯಾಗಾರ
  • whatsapp icon

ಮಂಗಳೂರು : ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ʼNew Age Alloys and Composites in the Advent of AI, ML, and 3D Printingʼ ಕುರಿತು ಮೂರು ದಿನಗಳ ಅಂತಾರಾಷ್ಟ್ರೀಯ ಉಪನ್ಯಾಸಕರ ತರಬೇತಿ ಕಾರ್ಯಾಗಾರ ನಡೆಯಿತು.

ಆನ್‌ಲೈನ್‌ನಲ್ಲಿ ನಡೆದ ಈ ಕಾರ್ಯಗಾರದಲ್ಲಿ ಜಗತ್ತಿನ ಹೆಸರಾಂತ ವಿಶ್ವವಿದ್ಯಾನಿಲಯಗಳ ಪ್ರಮುಖ ಶಿಕ್ಷಣ ತಜ್ಞರು, ಸಂಶೋಧಕರು ಮತ್ತು ಉದ್ಯಮಿಗಳು ಭಾಗವಹಿಸಿದರು. ಕೃತಕ ಬುದ್ಧಿಮತ್ತೆ (AI), ಯಂತ್ರ ಕಲಿಕೆ (ML) ಮತ್ತು 3D ಮುದ್ರಣ ಸೇರಿದಂತೆ ತಂತ್ರಜ್ಞಾನಗಳ ಕುರಿತ ಚರ್ಚೆಗೆ ಕಾರ್ಯಗಾರವು ವೇದಿಕೆಯನ್ನು ಕಲ್ಪಿಸಿತು. ಪ್ರತಿ ವಿಭಾಗಗಳಲ್ಲಿ 230ಕ್ಕೂ ಅಧಿಕ ಮಂದಿ ಭಾಗವಹಿಸಿದರು.

ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ಎಸ್.ಐ. ಮಂಜುರ್ ಬಾಷಾ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಅವರು ಎಂಜಿನಿಯರಿಂಗ್ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಂತಾರಾಷ್ಟ್ರೀಯ ತಂತ್ರಜ್ಞಾನಗಳನ್ನು ಸಂಯೋಜಿಸುವ ಮಹತ್ವವನ್ನು ವಿವರಿಸಿದರು.

ಯುಕೆಯ ಟೀಸೈಡ್ ವಿಶ್ವವಿದ್ಯಾಲಯದ ಡಾ. ಜಿನೂಪ್ ಅರಕ್ಕಲ್ ನಾರಾಯಣನ್, ಅಮೆರಿಕದ ಐಯೋವಾ ಸ್ಟೇಟ್ ವಿಶ್ವವಿದ್ಯಾಲಯದ ಡಾ. ಕೆ. ಆರ್. ರಾಮ್‌ಕುಮಾರ್, ಎನ್ಐಟಿ ವಾರಂಗಲ್‌ನ ಡಾ.ಮಂಜಿಯಾ, ಎಂಐಟಿ ಮಣಿಪಾಲದ ಡಾ.ಸತ್ಯಶಂಕರ ಶರ್ಮಾ ಅವರು ಎಐ-ಚಾಲಿತ ಸಾಮಗ್ರಿಗಳ ವಿನ್ಯಾಸ, ಸುಸ್ಥಿರ ಸಂಯೋಜನೆಗಳು, ಮತ್ತು ಡಿಜಿಟಲ್ ಉತ್ಪಾದನೆಯ ಭವಿಷ್ಯಗಳ ಕುರಿತು ಉಪನ್ಯಾಸವನ್ನು ನೀಡಿದರು.

ಉಪನ್ಯಾಸವನ್ನು ಸಹಾಯಕ ಪ್ರಾಧ್ಯಾಪಕರಾದ ಡಾ.ಸಂದೀಪ್ ನಂಬಿಯಾರ್ ಎಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಪೃಥ್ವಿರಾಜ್ ಎಂ.ಸಂಯೋಜಿಸಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ವಸಂತ ಕುಮಾರ್ ಸ್ವಾಗತಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಇಮ್ರಾನ್ ಮೊಕಾಶಿ ಧನ್ಯವಾದ ಸಮರ್ಪಿಸಿದರು. ಭಾರತ ಸೇರಿದಂತೆ ಜಗತ್ತಿನ ವಿವಿಧ ಸಂಸ್ಥೆಗಳ ಪ್ರಾಧ್ಯಾಪಕರು ಉಪನ್ಯಾಸ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News