ಬೈಕ್ ಕಳವು ಪ್ರಕರಣ: ತುಮಕೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

Update: 2023-10-28 10:49 GMT

ಬಂಧಿತ ಆರೋಪಿಗಳು - ಪೊಲೀಸರ ತಂಡ

ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ. ಜಿಲ್ಲೆಯ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯ ವೀರೇಂದ್ರ ಬಂಧಿತರು ಎಂದು ತಿಳಿದು ಬಂದಿದೆ.

ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ ಕೊಡಂಗಲ್ಲು ಮಹಾವೀರ ಕಾಲೇಜಿನ ಎದರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ದ್ವಿಚಕ್ರ ವಾಹನವನ್ನು ನಿಲ್ಲಿಸಲು ಹೇಳಿದಾಗ ವಾಹನವನ್ನು ನಿಲಿಸದೇ ಹಿಂತಿರುಗಲು ಪ್ರಯತ್ನಿಸುತ್ತಿರುವ ವೇಳೆ ಪೊಲೀಸ್ ನಿರೀಕ್ಷಕ ಸಂದೇಶ್ ಹಾಗೂ ಸಿಬ್ಬಂದಿಯವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆ ಬಳಿಕ ವಿಚಾರಣೆ ನಡೆಸಿದಾಗ ಅ.10 ರಂದು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಒಂದು ಬೈಕ್ ಮತ್ತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಜೈನ್ ಪಿ.ಯು ಕಾಲೇಜಿನ ಎದುರು ಇರುವ ಅರ್ಹತ್ ಅಪಾರ್ಟ್ಮೆಂಟ್ ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿ‌ದ್ದ ಬೈಕ್‌ ಅನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಒಟ್ಟು ಅಂದಾಜು ಮೌಲ್ಯ 1,80,000/- ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೊಯಲ್ IPS (ಕಾ&ಸು), ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಸಿಬಂದಿಗಳು ಕಾರ್ಯಚರಣೆ ನಡೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News