ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Update: 2024-05-04 08:20 GMT

ಮಂಗಳೂರು : ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ  ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಏರ್ ರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್‌ ಬಂದಿದೆ ಎಂದು ತಿಳಿದು ಬಂದಿದೆ.

ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News