ವಿಟ್ಲ: ಬಸ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

Update: 2023-12-16 15:43 GMT

ವಿಟ್ಲ: ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ‌ ಕಬಕ‌ ಸಮೀಪದ ಮಿತ್ತೂರು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಮ್ ಎಂದು ಗುರುತಿಸಲಾಗಿದೆ.

ಕಬಕ ಕೂವೆಹಿತ್ತಿಲು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News