ಮುಮ್ತಾಝ್‌ ಅಲಿ ಪ್ರಕರಣ | ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

Update: 2024-10-08 11:27 GMT

ಸುರತ್ಕಲ್‌: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್‌ ಉಪ ಆಯುಕ್ತ ಮನೋಜ್‌ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್‌ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ಮುಮ್ತಾಝ್‌ ಅಲಿ ಸಾವು ಪ್ರಕರಣದಕ್ಕೆ ಸಂಬಂಧಿಸಿ A1 ಆರೋಪಿ ಸುರತ್ಕಲ್ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ರೆಹಮತ್‌ (41) ಆಕೆಯ ಪತಿ A5 ಆರೋಪಿ ಶುಐಬ್‌ ಹಾಗೂ ಆರೋಪಿ ಸತ್ತಾರ್‌ ಎಂಬವರ ಕಾರು ಚಾಲಕ ಎ 6 ಆರೋಪಿ ಸಿರಾಜ್‌ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ.

ರೆಹಮತ್‌ ಮತ್ತು ಆಕೆಯ ಪತಿ ಶುಐಬ್‌ನನ್ನು ಸೋಮವಾರ ಸಂಜೆ ಕೇರಳದಲ್ಲಿ ವಶಕ್ಕೆ ಪಡೆದಿದ್ದು, ಸಿರಾಜ್‌ ನನ್ನು ಕೃಷ್ಣಾಪುರದ ಆತನ ಮನೆಯಿಂದಲೇ ಸಿಸಿಬಿ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಮಮ್ತಾಝ್‌ ಅಲಿ ಅವರ ಸಹೋದರ ಹೈದರ್‌ ಅಲಿ ಎಂಬವರು ರೆಹಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್‌, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು. ಅವರ ದೂರು ಆಧರಿಸಿ ಐಪಿಸಿ 308(2), 308(5), 352, 351(2) 190 ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸದ್ಯ ಪ್ರಕರಣದಲ್ಲಿನ ಪ್ರಮುಖ A1 ಆರೋಪಿ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News