ಪೆರುವಾಯಿ ಗ್ರಾ.ಪಂ.: ಕಾಂಗ್ರೆಸ್ ಬೆಂಬಲಿತರಿಗೆ ಬಹುಮತವಿದ್ದರೂ ಬಿಜೆಪಿಗೆ ಒಲಿದ ಉಪಾಧ್ಯಕ್ಷ ಸ್ಥಾನ

Update: 2023-08-13 11:51 GMT

ನೆಫೀಸ - ಲಲಿತಾ

ವಿಟ್ಲ : ಪೆರುವಾಯಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೆಫೀಸ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಲಲಿತಾ ಆಚಾರ್ಯ ಆಯ್ಕೆಯಾಗಿದ್ದಾರೆ.

ಪೆರುವಾಯಿ ಗ್ರಾಮ ಪಂಚಾಯತ್ ನಲ್ಲಿ 8 ಮಂದಿ ಸದಸ್ಯರಿದ್ದು, ಅದರಲ್ಲಿ 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ 3 ಬಿಜೆಪಿ ಬಂಬಲಿತ ಸದಸ್ಯರಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಸದಸ್ಯನೋರ್ವ ಅಡ್ಡ ಮತ ಚಲಾಯಿಸಿದ ಪರಿಣಾಮ ಸಮಾನ ಮತ ಪಡೆದ ಅಧ್ಯಕ್ಷ – ಉಪಾಧ್ಯಕ್ಷರನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೆಪೀಸ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ನಾಮಪತ್ರ ಸಲ್ಲಿಸಿದ್ದರು.

ಈ ವೇಳೆ ನಡೆದ ಮತದಾನದಲ್ಲಿ ಎರಡೂ ಅಭ್ಯರ್ಥಿಗಳು ಸಮಬಲ ಸಾಧಿಸಿದ್ದರು. ಬಳಿಕ ಚೀಟಿ ಎತ್ತುವ ಮೂಲಕ ನೆಫೀಸ ಅಧ್ಯಕ್ಷರಾಗಿ ಆಯ್ಕೆಯಾದರು.

ಬಳಿಕ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರಶ್ಮಿ ಎಂ. ಹಾಗೂ ಬಿಜೆಪಿ ಬೆಂಬಲಿತ ಸದಸ್ಯೆ ಲಲಿತಾ ಆಚಾರ್ಯ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ನಡೆದ ಮತದಾನದಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಅಡ್ಡ ಮತದಾನ ಮಾಡಿದ್ದು, ಇದರಿಂದ ಎರಡೂ ಅಭ್ಯರ್ಥಿಗಳು ಸಮಬಲ ಸಾಧಿಸಿದ್ದರು. ಬಳಿಕ ಚೀಟಿ ಎತ್ತುವ ಮೂಲಕ ಲಲಿತಾ ಆಚಾರ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಪೆರುವಾಯಿ ಗ್ರಾಮ ಪಂಚಾಯತ್‌ ನಲ್ಲಿ ಕಾಂಗ್ರೆಸ್‌ ಬೆಂಬಲಿತರ ಸಂಖ್ಯೆ ಹೆಚ್ಚಿದ್ದರೂ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಅಡ್ಡ ಮತ ಚಲಾಯಿಸಿದ ಪರಿಣಾಮ ಬಿಜೆಪಿ ಬೆಂಬಲಿತ ಸದಸ್ಯೆ ಉಪಾಧ್ಯಕ್ಷರಾಗಲು ಸಾಧ್ಯವಾಯಿತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News