ಕೂಳೂರಿನಲ್ಲಿ ಮುಮ್ತಾಝ್ ಅಲಿ ಮೃತದೇಹ ಪತ್ತೆ

Update: 2024-10-07 07:07 GMT

ಕಾವೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಇಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ ಮುಮ್ತಾಝ್ ಅಲಿ ಅವರ ಮೃತದೇಹ ಸೋಮವಾರ ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ.

ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಕೋಸ್ಟ್ ಗಾರ್ಡ್ ಸೇರಿದಂತೆ ಸ್ಥಳೀಯ ನಾಡದೋಣಿ ಮೀನುಗಾರರು  ಸೋಮವಾರ ಬೆಳಗ್ಗೆ 6 ಗಂಟೆಯಿಂದ ಹುಡುಕಾಟದಲ್ಲಿ ತೊಡಗಿದ್ದರು.

ಇದೀಗ ಮಂಗಳೂರು - ಕೂಳೂರು ಸೇತುವೆ ಬಳಿ ಬೆಳಿಗ್ಗೆ 10:40 ರ ಸುಮಾರಿಗೆ ಸ್ಥಳೀಯ  ಮೀನುಗಾರರ ದೋಣಿಗೆ ಮೃತದೇಹ ಪತ್ತೆಯಾಗಿದೆ.

ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

ಮುಮ್ತಾಜ್ ಅಲಿ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಕೃಷ್ಣಾಪುರದ ಬ್ಲಾಕ್ ‌ನಂಬರ್ 8 ರಲ್ಲಿರುವ (ಚೊಕ್ಕಬೆಟ್ಟು) ತರವಾಡು ಮನೆಗೆ ಸಂಜೆ ಮೂರು ಗಂಟೆಗೆ ತರಲಾಗುವುದು. ಅಲ್ಲಿ ಅಂತಿಮ ದರ್ಶನಕ್ಕೆ ಸಂಜೆ 4 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗುವುದು. ನಂತರ ಕೃಷ್ಣಾಪುರ 7 ನೇ ಬ್ಲಾಕ್ ನ ಈದ್ಗಾ ಮಸೀದಿ (ಅಲ್ ಮದ್ರಸತುಲ್ ಬದ್ರಿಯಾ) ಯಲ್ಲಿ ದಫನ ಕಾರ್ಯ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News