ದೇರಳಕಟ್ಟೆ: ನಮ್ಮೂರ ಸನ್ಮಾನ ಸಮಿತಿಯಿಂದ ಸ್ಪೀಕರ್ ಯು.ಟಿ.ಖಾದರ್ ಗೆ ಸನ್ಮಾನ
ಉಳ್ಳಾಲ, ಆ.29: ಒಬ್ಬ ಶಾಸಕರಾಗಿ, ಸಚಿವರಾಗಿ ಜನರ ಒಳಿತಿಗೆ ಏನೆಲ್ಲ ಮಾಡಲು ಸಾಧ್ಯ ಎಂಬುದನ್ನು ಯು.ಟಿ. ಖಾದರ್ ಮೂಲಕ ತಿಳಿದುಕೊಳ್ಳಲು ಸಾಧ್ಯ ಎಂದು ನಿಟ್ಟೆ ವಿವಿ ಸಹ ಕುಲಾಧಿಪತಿ ಡಾ.ಶಾಂತರಾಂ ಶೆಟ್ಟಿ ಹೇಳಿದ್ದಾರೆ.
ಅವರು ದೇರಳಕಟ್ಟೆಯ ನಮ್ಮೂರ ಸನ್ಮಾನ ಸಮಿತಿಯ ಆಶ್ರಯದಲ್ಲಿ ದೇರಳಕಟ್ಟೆ ಸಿಟಿ ಗ್ರೌಂಡ್ ನಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಏರ್ಪಡಿಸಿದ್ದ ನಮ್ಮೂರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಬೆಳ್ಮ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೂಸುಫ್ ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಮತ್ತು ಬೆಳ್ಮ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಿ.ಎಂ.ಸತ್ತಾರ್ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಯು.ಟಿ.ಖಾದರ್, ನಾನು ವಿಧಾನಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಲು ನನ್ನ ಕ್ಷೇತ್ರದ ಮತದಾರರು ಕಾರಣರು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ ಎಂದರು.
ಕಾರ್ಯಕ್ರಮದಲ್ಲಿ ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಸದಸ್ಯ ಸುರೇಶ್ ಚೌಟ, ಬೆಳ್ಮ ಗ್ರಾಮ ಪಂಚಾಯತ್ ಅಧ್ಯಕ್ಷೆ ರಝಿಯಾ, ಉಪಾಧ್ಯಕ್ಷೆ ಹೇಮಾವತಿ, ಸದಸ್ಯರಾದ ಇಕ್ಬಾಲ್ ಎಚ್.ಆರ್., ರವೂಫ್ ರೆಂಜಾಡಿ, ಹನೀಫ್ ಬದ್ಯಾರ್, ರಝಾಕ್, ಇಬ್ರಾಹೀಂ ಉದ್ಯಮಿಗಳಾದ ಅಬೂಬಕರ್ ನಾಟೆಕಲ್, ಸಿ.ಎಂ.ಫಾರೂಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ವಕೀಲ ಪದ್ಮರಾಜ್, ಕಾಂಗ್ರೆಸ್ ಮುಖಂಡ ಆಲ್ವಿನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
ಅಕ್ಸಾ ಉಸ್ಮಾನ್ ಸ್ವಾಗತಿಸಿದರು.ಮ್ಮೂರ ಸನ್ಮಾನ ಸಮಿತಿಯ ಕಾರ್ಯದರ್ಶಿಗಳಾದ ಸಿದ್ದೀಕ್ ಗ್ಲ್ಯಾಡ್, ಸುರೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಶಿಹಾಬುದ್ದೀನ್ ದೇರಳಕಟ್ಟೆ ವಂದಿಸಿದರು.