ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ಈ ಸಾಲಿನಲ್ಲಿ ಸುಮಾರು ರೂ. 605 ಕೋಟಿಗೂ ಹೆಚ್ಚು ಲಾಭಾಂಶವನ್ನು ಅರ್ಹ ಸ್ವಸಹಾಯ ಸಂಘಗಳ ಸದಸ್ಯರಿಗೆ ವಿತರಿಸುವ ಐತಿಹಾಸಿಕ ಕಾರ್ಯಕ್ರಮ ನ.14ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಜರುಗಿತು.
ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ನಬಾರ್ಡ್ ಅಧ್ಯಕ್ಷ ಶಾಜಿ ಕೆ.ವಿ, ಸಂಸದ ಕ್ಯಾ। ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಲ, ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಧನ್ಯಶ್ರೀ ಸಂಘ ಬೆಳ್ತಂಗಡಿ, ಶ್ರೀ ನಿಧಿ ಸಂಘ ಕುಂದಾಪುರ, ಶ್ರೀ ಶಂಕರ ಸಂಘ ಹೊಸಪೇಟೆ, ಅಪೂರ್ವ ಸಂಘ ಆನೇಕಲ್, ಅಹದ್ ಸಂಘ ಖಾನಾಪುರ, ರೋಶನ್ ಸಂಘ ಹಾಸನ ಇವರಿಗೆ ಸಾಂಕೇತಿಕವಾಗಿ ಸಚಿವರು ಲಾಭಾಂಶ ವಿತರಿಸಿದರು.
ಮುಖ್ಯ ಹಣಕಾಸು ಅಧಿಕಾರಿ ಶಾಂತಾರಾಮ್ ಪೈ, ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ, ದುಗ್ಗೇ ಗೌಡ, ವಿವೇಕ್ ವಿನ್ಸೆಂಟ್ ಪಾಯಸ್ ಸಚಿವರು ಹಾಗೂ ಅತಿಥಿಗಳನ್ನು ಗೌರವಿಸಿದರು.
ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸ್ವ ಸಹಾಯ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.