ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ
Update: 2024-12-04 07:05 GMT
ಮಂಗಳೂರು: ಬಜ್ಪೆಯಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ನ.30ರಂದು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನಕ್ಕೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ. ಈ ಬಗ್ಗೆ ಡಿ.1ರಂದು ಸಿಐಎಸ್ ಎಫ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬೆದರಿಕೆ ಇ ಮೇಲ್ ಅಕ್ರಮ್ ವೈಕರ್ ಹೆಸರಿನಿಂದ ಓಟ್ ಲುಕ್.ಕಾಮ್ ಎಂಬ ಇಮೇಲ್ ವಿಳಾಸದಿಂದ ಬಂದಿದೆ ಎಂದು ತಿಳಿದು ಬಂದಿದೆ. ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯು ತೀವ್ರ ತಪಾಸಣೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಟ್ಟಿತೆನ್ನಲಾಗಿದೆ.