ಮಹೇಶ್ ಶೆಟ್ಟಿ ತಿಮರೋಡಿಗೆ ಗನ್‌ಮ್ಯಾನ್ ಒದಗಿಸುವಂತೆ ಮಾಜಿ ಶಾಸಕ ವಸಂತ ಬಂಗೇರ ಮನವಿ

Update: 2023-08-18 15:28 GMT

ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಸೌಜನ್ಯ ಪರ ಹೋರಾಟದ ಮುಂಚೂಣಿಯಲ್ಲಿರುವ ಪ್ರಜಾಪ್ರಭುತ್ವ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ರಕ್ಷಣೆಗಾಗಿ ಗನ್ ಮ್ಯಾನ್ ಒದಗಿಸುವಂತೆ ಮಾಜಿ ಶಾಸಕ ಕೆ‌. ವಸಂತ ಬಂಗೇರ ಅವರು ಗೃಹ ಸಚಿವರಾದ ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News