ಇಂದಿನಿಂದ ಸಚಿವ ಝಮೀರ್ ಅಹ್ಮದ್ ದ.ಕ. ಜಿಲ್ಲಾ ಪ್ರವಾಸ

Update: 2023-09-04 07:03 GMT

ಮಂಗಳೂರು, ಸೆ.3: ರಾಜ್ಯ ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಸೆ.4ರಿಂದ 6ರ ತನಕ ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಸೆ.4ರಂದು ಸಂಜೆ 4:10ಕ್ಕೆ ಮಂಗಳೂರು ತಲುಪುವ ಅವರು, ರಾತ್ರಿ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆ.5ರಂದು ಬೆಳಗ್ಗೆ 8:30ಕ್ಕೆ ಯೆನೆಪೊಯ ವಿವಿ ಕುಲಪತಿ ಹಾಜಿ ಡಾ.ವೈ.ಅಬ್ದುಲ್ಲ ಕುಂಞಿ ಆಯೋಜಿಸಿರುವ ಬೆಳಗ್ಗಿನ ಉಪಹಾರ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡರೊಂದಿಗಿನ ಚರ್ಚೆಯಲ್ಲಿ ಭಾಗವಹಿಸಲಿರುವರು.

ಬಳಿಕ 9:00 ಗಂಟೆಗೆ ಕಣಚೂರು ಮೆಡಿಕಲ್ ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಫಿಸಿಯೋಕಾನ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12:30ಕ್ಕೆ ಪುತ್ತೂರು ತಾಲೂಕಿನ ಇಡ್ಕಿದು ಗ್ರಾಮದ ಮಿತ್ತೂರಿನ ದಾರುಲ್ ಇರ್ಷಾದ್ ಸಂಸ್ಥೆಯಲ್ಲಿ ನಡೆಯುವ ಪ್ರಧಾನ ಮಂತ್ರಿ ಜನ ವಿಕಾಸ ಯೋಜನೆಯಡಿ ನಿರ್ಮಾಣಗೊಂಡ ಶಾಲಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2:30ಕ್ಕೆ ಮಂಗಳೂರಿನ ಕದ್ರಿಯಲ್ಲಿರುವ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ.

ಸಾಯಂಕಾಲ 4:00 ಗಂಟೆಗೆ ನಗರದ ಪುರಭವನದಲ್ಲಿ ದ.ಕ ಜಿಲ್ಲಾ ಅಭಿನಂದನಾ ಸಮಿತಿ ವತಿಯಿಂದ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಾಯಂಕಾಲ 7:00 ಗಂಟೆಗೆ ತೊಕ್ಕೊಟ್ಟು-ಹಳೇಪೇಟೆ ಮೀನು ಮಾರುಕಟ್ಟೆ, ಕೊಳಚೆ ಪ್ರದೇಶಕ್ಕೆ ಭೇಟಿ ನೀಡಿ, 7:30 ಕ್ಕೆ ಉಳ್ಳಾಲ ದರ್ಗಾ ಸಂದರ್ಶನದ ಬಳಿಕ ರಾತ್ರಿ 8:00 ಗಂಟೆಗೆ ವಿಶ್ರಾಂತಿಗಾಗಿ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡುವರು.

ಸೆ.6 ರಂದು ಬೆಳಿಗ್ಗೆ 9:30ಕ್ಕೆ ಮಂಗಳೂರಿನ ಪ್ರಸ್ತಾಪಿತ ಹಜ್ ಭವನದ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

11:30ಕ್ಕೆ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸುವರು.

ಸಾಯಂಕಾಲ 3:00 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News