ಮಂಗಳೂರು: ಬರಕಾ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿನಿಯಿಂದ ಗಿನ್ನೆಸ್ ವರ್ಲ್ಡ್ ರೆಕಾರ್ಡ್

Update: 2025-02-10 11:25 IST
ಮಂಗಳೂರು: ಬರಕಾ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿನಿಯಿಂದ ಗಿನ್ನೆಸ್ ವರ್ಲ್ಡ್ ರೆಕಾರ್ಡ್
  • whatsapp icon

ಮಂಗಳೂರು: ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ನ 7ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಶಝಾರವರು, ತಮಿಳುನಾಡಿನ ಚೆನ್ನೈನಲ್ಲಿ ನಡೆದ ಒಂದೇ ಸ್ಥಳದಲ್ಲಿ ಕರಾಟೆ ವಿಭಾಗದ ಗುಂಪಿನಲ್ಲಿ 30 ನಿಮಿಷಗಳ ಕಾಲ ತಡೆರಹಿತ ಕಟಾ ಮಾಡಿ ಗಿನ್ನೆಸ್ ದಾಖಲೆ ಬರೆದಿದ್ದಾರೆ. ಅದರ ಜೊತೆಗೆ ಕುಮಿಟೆ ವೈಯಕ್ತಿಕ ವಿಭಾಗದಲ್ಲೂ ಚಿನ್ನದ ಪದಕ ಪಡೆದಿರುತ್ತಾರೆ.

ಬಂಟ್ವಾಳ ತಾಲೂಕು ಪಾಣೆಮಂಗಳೂರಿನ ಸೌಸ್ರೀನ್ ಹಾಗೂ ಕಾಸಿಮ್ ದಂಪತಿಯ ಪುತ್ರಿಯಾಗಿರುವ ಶಝಾ ಖ್ಯಾತ ಕರಾಟೆ ತರಬೇತುದಾರೇರಾದ ಝಕಿಯಾ ಯಾಸ್ಮೀನ್ ಮತ್ತು ನದೀಮ್ ರಿಂದ ತರಬೇತು ಪಡೆಯುತ್ತಿದ್ದಾರೆ.

ಶಾಲಾ ಆಡಳಿತ ಮಂಡಳಿ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಪರವಾಗಿ ಸಂಸ್ಥೆಯ ಅಧ್ಯಕ್ಷರಾದ ಮುಹಮದ್ ಅಶ್ರಫ್ ಬಜ್ಪೆರವರು ವಿದ್ಯಾರ್ಥಿನಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News