ವಿದ್ಯಾರ್ಥಿಗಳನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವಲ್ಲಿ ಗುರುಗಳ ಪಾತ್ರ ಅನನ್ಯ: ಶಾಸಕ ವೇದವ್ಯಾಸ ಕಾಮತ್

Update: 2023-09-05 18:31 GMT

ಮಂಗಳೂರು: ಸಮಾಜದಲ್ಲಿ ತಂದೆ ತಾಯಿ ಬಳಿಕ ಗುರುಗಳಿಗೆ ಮಹತ್ವದ ಸ್ಥಾನವಿದೆ. ವಿದ್ಯಾರ್ಥಿಗಳನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವಲ್ಲಿ ಗುರುಗಳ ಪಾತ್ರ ಅನನ್ಯ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ದ.ಕ.ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚಾರಣಾ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಜಪ್ಪಿನಮೊಗರು ಪ್ರೆಸ್ಟೀಜ್ ಇಂಟರ್‌ನ್ಯಶನಲ್ ಸ್ಕೂಲ್‌ನಲ್ಲ ಮಂಗಳವಾರ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ದೊಡ್ಡ ಬದಲಾವಣೆಯ ಸಾಮರ್ಥ್ಯ ಶಿಕ್ಷಕರಲ್ಲಿದೆ. ಸ್ಪರ್ಧಾತ್ಮಕವಾಗಿರುವ ಇಂದಿನ ಯುಗದಲ್ಲಿ ವಿದ್ಯಾರ್ಥಿ ಗಳಿಗೆ ಸವಾಲನ್ನು ಎದುರಿಸುವ ಶಕ್ತಿಯನ್ನು ಶಿಕ್ಷಕರು ತುಂಬಬೇಕಾಗಿದೆ. ಶಿಕ್ಷಕರು ತಮ್ಮಲ್ಲಿರುವ ಪ್ರತಿಭೆ, ಅನುಭವವನ್ನು ಬಳಿಸಿಕೊಂಡು ವಿದ್ಯಾರ್ಥಿಗಳ ಸರ್ವಾಂಗಿಣ ಬೆಳವಣಿಗೆಯ ಕಡೆಗೆ ಗಮನ ನೀಡಬೇಕಾಗಿದೆ ಎಂದರು.

ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ತಾಂಡವಾಡುತ್ತಿದ್ದರೂ, ಶಿಕ್ಷಣ ಕ್ಷೇತ್ರದಲ್ಲಿ ಭ್ರಷ್ಟಾಚಾರ ಇಲ್ಲ ಎಂದ ಅವರು ಹಿಂದೆ ಶಿಕ್ಷಕರ ಬಗ್ಗೆ ಇದ್ದ ಗೌರವ ಭಾವನೆ ಇವತ್ತಿನ ದಿನಗಳಲ್ಲಿ ಬದಲಾಗುತ್ತಿದೆ. ಈ ಬಗ್ಗೆ ಶಿಕ್ಷಕರು ಯೋಚಿಸಬೇಕಾಗಿದೆ ಎಂದು ಹೇಳಿದರು.

ವಾಮಂಜೂರು ಅನುದಾನಿತ ಮಂಗಳ ಜ್ಯೋತಿ ಸಮಗ್ರ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಅಶೋಕ್ ಕುಮಾರ್‌ ದಿಕ್ಚೂಚಿ ಭಾಷಣ ಮಾಡಿದರು.

59 ಮಂದಿ ನಿವೃತ್ತ ಶಿಕ್ಷಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜಪ್ಪಿನಮೊಗರು ವಾರ್ಡ್‌ನ ಕಾರ್ಪೊರೇಟರ್ ವೀಣಾ ಮಂಗಳ, ಮಂಗಳೂರು ತಾ.ಪಂ ಕಾರ್ಯ ನಿರ್ವಹಣಾ ಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಯೂನಿಯನ್ ಬ್ಯಾಂಕ್ ಡಿಜಿಎಂ ಮಹೇಶ್ , ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಪೂರ್ಣಿಮಾ ರೈ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಶಂಕರ್ ಎನ್,ಮಂಗಳೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ, ಮಂಗಳೂರು ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಮಂಗಳೂರು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಪ್ರಮೀಳಾ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಸ್ಟಾನಿ ತಾವ್ರೊ, ದೈಹಿಕ ಶಿಕ್ಷಕರ ಸಂಘದ ಮೈಸೂರು ವಿಭಾಗದ ಕಾರ್ಯಾಧ್ಯಕ್ಷ ತ್ಯಾಗಂ ಹರೇಕಳ, ದ.ಕ.ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಲಿಲ್ಲಿ ಪಾಯಸ್, ದ.ಕ.ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ಅಧ್ಯಕ್ಷ ರಾಜಗೋಪಾಲ್ ರೈ, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷ ಕಿಶೋರ್ ಕೊಟ್ಟಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಎಚ್.ಆರ್.ಸ್ವಾಗತಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ವಂದಿಸಿದರು.ಶಿಕ್ಷಕರಾದ ಮೋಹನ್ ಶಿರ್ಲಾಲ್ ಮತ್ತು ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News