ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ

Update: 2023-07-23 15:09 GMT

ಮಂಗಳೂರು, ಜು.23:ಕರಾವಳಿ ಕರ್ನಾಟಕದಲ್ಲಿ ಮಳೆ ತೀವ್ರಗೊಂಡಿದ್ದು. ಜು.28ರ ತನಕ ಭಾರೀ ಮಳೆಯಾಗಲಿದೆ.

ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗಲಿದೆ (115.6 ಮಿಮೀ ನಿಂದ 204.4 ಮಿಮೀ) ಜು.23ರಿಂದ 27ರ ತನಕ ಗಂಟೆಗೆ 40-45ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರದಲ್ಲಿ ದೈತ್ಯ ಅಲೆಗಳು ಕಾಣಿಸಿಕೊಳ್ಳಲಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿಯಲ್ಲಿ ಜು.23 ರಂದು 23:30 ಗಂಟೆಗಳಲ್ಲಿ 3.5-4.0 ಮೀಟರ್ ವ್ಯಾಪ್ತಿಯಲ್ಲಿ ದೊಡ್ಡ ಅಲೆಗಳ ಮುನ್ಸೂಚನೆ ಇದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News