ಬಿಜೆಪಿಯಿಂದ ರಘುಪತಿ ಭಟ್ ಉಚ್ಚಾಟನೆ ಬಗ್ಗೆ ಹಿಜಾಬ್ ವಿವಾದ ಪ್ರಕರಣದ ಸಂತ್ರಸ್ತೆ ಆಲಿಯಾ ಅಸ್ಸಾದಿ ಪ್ರತಿಕ್ರಿಯೆ
Update: 2024-05-28 09:32 GMT
ಉಡುಪಿ: ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು ಎಂದು ಹಿಜಾಬ್ ವಿವಾದ ಪ್ರಕರಣದ ಸಂತ್ರಸ್ತೆ ಆಲಿಯಾ ಅಸ್ಸಾದಿ ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಅವರು, ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ? ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ಹೇಳಿದ್ದಾರೆ.
ರಘುಪತಿ ಭಟ್ ಅವರೇ, ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ತಿರುಗೇಟು ನೀಡಿದ್ದಾರೆ.