ಜು.27ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Update: 2023-07-26 18:11 GMT

 ಮುಲ್ಲೈ ಮುಗಿಲನ್

ಮಂಗಳೂರು, ಜು.26: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪೌಢಶಾಲೆಗಳಿಗೆ ಜು. 27ರಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ತುರ್ತು ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ.

ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಹಾಗೂ ವಿಪತ್ತು ನಿರ್ವಹಣೆಯನ್ನು ನಿರ್ವಹಣೆ ಯನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ನಿರ್ವಹಿಸಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು / ಸಾರ್ವಜನಿಕರು ನದಿ ತೀರಕ್ಕೆ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ . ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪ ನಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಸಂಪರ್ಕ ದೂರವಾಣಿ ಸಂಖ್ಯೆ ಕಂಟ್ರೋಲ್ ರೂಂ -1077/ 0824-2442590 ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News