ಕಾಡುಪ್ರಾಣಿಗಳ ಬೇಟೆ | ಸುಳ್ಯದಲ್ಲಿ 3 ಮನೆಗಳ ಮೇಲೆ ಅರಣ್ಯಾಧಿಕಾರಿಗಳ ದಾಳಿ
ಸುಳ್ಯ, ಜು.12: ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪದಲ್ಲಿ ಮೂರು ಮನೆಗಳ ಮೇಲೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಕಾಡು ಪ್ರಾಣಿ ಮಾಂಸ ಹಾಗೂ ಕೋವಿಯನ್ನು ವಶಪಡಿಸಿಕೊಂಡ ಘಟನೆ ಸಂಪಾಜೆ ವಲಯದ ದಬ್ಬಾಡ್ಕ ಉಪ ವಲಯದ ಪಟ್ಟಿಘಾಟ್ ಸಮೀಪ ನಡೆದಿದೆ.
ಮದನ್ ಕುಮಾರ್ ಹೊಸೂರು, ಪಾನೇಡ್ಕ ಗಣಪತಿ, ಹಾಗೂ ಪ್ರಸನ್ನ ಪಾನೇಡ್ಕ ಎಂಬವರ ಮನೆಗಳ ಮೇಲೆ ದಾಳಿ ಅರಣ್ಯಾಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾಡುಪ್ರಾಣಿಗಳ ಮಾಂಸ, ಪದಾರ್ಥ ಮತ್ತು ಕೋವಿ ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ತಲೆಮಾರೆಸಿಕೊಂಡಿದ್ದಾರೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕಾರ್ಯಾಚರಣೆಯು ಉಪ ಅರಣ್ಯ ಸಂರಕ್ಷಣಧಿಕಾರಿ ಕೆ.ಟಿ ಪೂವಯ್ಯ ಮಾರ್ಗದರ್ಶನದಲ್ಲಿ, ವಲಯ ಅರಣ್ಯ ಅಧಿಕಾರಿ ಮಧು ಸೂದನ್ ನೇತೃತ್ವದಲ್ಲಿ, ಸಿಬ್ಬಂದಿಯಾದ ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮುಹಮ್ಮದ್, ಗಸ್ತು ಅರಣ್ಯ ಪಾಲಕರಾದ ಚಂದ್ರಪ್ಪ ಬಣಕಾರ್, ಕಾರ್ತಿಕ್ ಡಿ. ಹಾಗೂ ಸಿಬ್ಬಂದಿಯಾದ ಮನೋಜ್, ದುರ್ಗಾ ಪ್ರಸಾದ್, ಗಗನ್, ಶರತ್, ಶಂಕರ ಪಾಲ್ಗೊಂಡಿದ್ದರು.