ನಿರಂತರ ಮಳೆ |‌ ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ರಜೆ

Update: 2024-07-04 03:13 GMT

ಬಂಟ್ವಾಳ: ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ಅವರು ರಜೆ  ಘೋಷಿಸಿದ್ದಾರೆ.

ಈ ದಿನ ತುಂಬಾ ಮಳೆ ಬರುತ್ತಿರುವ ಕಾರಣ (ರಾತ್ರಿಯೂ ಮಳೆಸುರಿದ ಕಾರಣ) ತೋಡು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಈ ದಿನ 4-07-2024 ರಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಯವಿಟ್ಟು ನಿಮ್ಮ ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆವಹಿಸಿ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News