ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿಗೆ ಆಹ್ವಾನ

Update: 2023-09-18 12:53 GMT

ಮಂಗಳೂರು, ಸೆ.18: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ.28, 29ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಹ್ವಾನಿಸಿದರು.

ಬೆಂಗಳೂರಿನಲ್ಲಿರುವ ಮುಖ್ಯಂಮತ್ರಿಯ ನಿವಾಸಕ್ಕೆ ತೆರಳಿದ ಸಂಘದ ಪದಾಧಿಕಾರಿಗಳು, ಸಂಘದ ಕಾರ್ಯಚಟುವಟಿಕೆಯ ಬಗ್ಗೆ ವಿವರಿಸಿದರು.

ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ಸಂಘದ ಪ್ರಮುಖರಾದ ನದ್ಯಂಪ್ಪ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಗಿರೀಶ್ ಶೆಟ್ಟಿ ತೆಳ್ಳರ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಕರ್ನಿರೆ ವಿಶ್ವನಾಥ ಶೆಟ್ಟಿ, ಉಳ್ತೂರು ಮೋಹನದಾಸ್ ಶೆಟ್ಟಿ, ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ, ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News