ಮಹಾರಾಷ್ಟ್ರ| ವಿಧಾನಸಭಾ ಚುನಾವಣೆಗೆ ಐವನ್ ಡಿಸೋಜ ಉಸ್ತುವಾರಿ

Update: 2024-09-09 17:33 GMT

ಮಂಗಳೂರು, ಸೆ.9: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದರ ಬಿವಂಡಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿಯಾಗಿ ಶಾಸಕ ಐವನ್ ಡಿಸೋಜ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಮಹಾನಗರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಐವನ್ ಡಿಸೋಜ ಕೇರಳ, ಗೋವಾ ಅಲ್ಲದೆ ಉತ್ತರ ಹಾಗೂ ಪೂರ್ವ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಸ್ಕ್ರೀನಿಂಗ್ ಕಮಿಟಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News