ಜೋಕಟ್ಟೆ: ಮನೆ ಮೇಲೆ ‌ತಡೆಗೋಡೆ ಕುಸಿತ; ಬಾಲಕ ಮೃತ್ಯು

Update: 2024-07-25 05:13 GMT

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ  ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.

ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 


Delete Edit


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News