ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ
Update: 2024-03-04 11:09 IST
ಕಡಬ, ಮಾ.04. ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ವಿದ್ಯಾರ್ಥಿಯೊಬ್ಬ ಆ್ಯಸಿಡ್ ದಾಳಿ ಮಾಡಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದಿರುವ ಬಗ್ಗೆ ವರದಿಯಾಗಿದೆ.
ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದ್ದು, ಸಂತ್ರಸ್ತ ವಿದ್ಯಾರ್ಥಿನಿಯರನ್ನು ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ ಅಲೀನಾ ಸಿಬಿ, ಅರ್ಚನಾ,ಅಮೃತ ಎಂದು ಗುರುತಿಸಲಾಗಿದೆ. ಆರೋಪಿಯು ಮಾಸ್ಕ್, ಹ್ಯಾಟ್ ಧರಿಸಿದ್ದು, ಕೇರಳ ಮೂಲದವನು ಎನ್ನಲಾಗುತ್ತಿದೆ.
ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.