ಕಡಬ | ವಾಹನ ಢಿಕ್ಕಿಯಾಗಿ ಮುರಿದುಬಿದ್ದ ವಿದ್ಯುತ್ ಕಂಬ

Update: 2023-11-19 04:17 GMT

ಕಡಬ, ನ.19: ಬೊಲೇರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದುಬಿದ್ದ ಘಟನೆ ಕಡಬ - ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ವಾಹನದಲ್ಲಿದ್ದ ಮಗು ಸಹಿತ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ವಾಹನ ಜಖಂಗೊಂಡಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ.

ಸ್ಥಳೀಯರು ಕೂಡಲೇ ಆಗಮಿಸಿ ವಾಹನದಲ್ಲಿದ್ದವರನ್ನು ಉಪಚರಿಸಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News